ಕರ್ನಾಟಕ ರಾಜ್ಯದ ಗಡಿಭಾಗದಲ್ಲಿರುವ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪಟ್ಟಣಾಧಾರಿತ ಶಿಕ್ಷಣವನ್ನು ನೀಡುವ ಸದುದ್ದೇಶದಿಂದ, ಸನ್ 1995 ರಲ್ಲಿ ಯಕ್ಸಂಬಾ ಗ್ರಾಮದಲ್ಲಿ ಸಹಕಾರ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆಯನ್ನು ಸ್ಥಾಪಿಸಿ, ಅದರಡಿಯಲ್ಲಿ ಶಿವಶಂಕರ ಜೊಲ್ಲೆ ಕನ್ನಡ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು ಸ್ಥಾಪಿಸಿ ಪ್ರಸ್ತುತ ನರ್ಸರಿಯಿಂದ 10 ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಸತಿ ಸಹಿತ ಮೂಲಭೂತ ಸೌಕರ್ಯಗಳನ್ನು ಒಳಗೊಂಡು, ಅತ್ಯಂತ ಉತ್ಕೃಷ್ಟ ಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸುತ್ತಿರುವ ಶಿಕ್ಷಣ ಸಂಸ್ಥೆಯೆಂದೇ ನಾಡಿನ ಎಲ್ಲೆಡೆ ಪ್ರಖ್ಯಾತವಾಗಿದೆ.
" ಗುಣಾತ್ಮಕ ಹಾಗೂ ಮೌಲ್ಯಯುತ ಶಿಕ್ಷಣ"
"ಜ್ಞಾನಂ ಪರಂ ಭಲಂ"